ಕರ್ನಾಟಕದಲ್ಲಿ ಪ್ರವಾಸೋದ್ಯಮ
ವಿಶ್ವದ ಬಹಳಷ್ಟು ರಾಷ್ಟ್ರಗಳಲ್ಲಿ ಪ್ರವಾಸೋದ್ಯಮವನ್ನು ಇಂದು ಒಂದು ಮುಖ್ಯ ಉದ್ಯಮವಾಗಿ ಗುರುತಿಸಲ್ಪಟ್ಟಿದೆ. ಅಂತರಾಷ್ಟ್ರೀಯ ಪ್ರವಾಸೋದ್ಯಮ ವಿಶ್ವದಲ್ಲೇ ಅತಿಹೆಚ್ಚು ವಿದೇಶಿ ವಿನಿಮಯಗಳಿಸುವ ಉದ್ಯಮವಾಗಿದೆ. ಇದರ ಜೊತೆಗೆ ಬಹಳಷ್ಟು ರಾಷ್ಟ್ರಗಳಲ್ಲಿ ಪ್ರವಾಸೋದ್ಯಮವು ಹೆಚ್ಚು ಉದ್ಯೋಗ ಸೃಷ್ಟಿಸುವ ಒಂದು ಉದ್ಯಮವಾಗಿ ಬೆಳೆದಿದೆ. ಪ್ರವಾಸೊದ್ಯಮವು ಒಂದು ಪ್ರದೇಶದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಹಾಗು ಅಲ್ಲಿನ ಜನರ ಜೀವನ ಸ್ಥಿತಿ ಉತ್ತಮಗೊಳಿಸುವಲ್ಲಿ ನೆರವಾಗುತ್ತದೆ. ಪ್ರವಾಸೋದ್ಯಮದಿಂದ ಸ್ಥಳೀಯ ಜನರಿಗೆ ಕೆಲಸ ಸಿಗುವುದರಿಂದ ಗ್ರಾಮಾಂತರ ಪ್ರದೇಶದಿಂದ ನಗರಕ್ಕೆ ಉದ್ಯೋಗಕ್ಕಾಗಿ ವಲಸೆ ಹೋಗುವುದು ಕಡಿಮೆಯಾಗುತ್ತದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿಶೀಲ ದೇಶಗಳು ವ್ಯವಸ್ಥಿತವಾಗಿ ಅಭಿವೃದ್ಧಿ ಪಡಿಸುವ ಮೂಲಕ ಬಡತನದ ಸಮಸ್ಯೆಯನ್ನು ನಿರ್ಮೂಲನೆ ಮಾಡಬಹುದು ಎಂದು ವಿಶ್ವ ಪ್ರವಾಸೋದ್ಯಮ ಸಂಸ್ಥೆ (WTO) ತಿಳಿಸುತ್ತದೆ. ಭಾರತದಲ್ಲಿ ಕೆಲವೇ ಕೆಲವು ರಾಜ್ಯಗಳು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿವೆ. ಆದರಲ್ಲಿ ಮುಖ್ಯವಾಗಿ ಗೋವಾ, ಕೇರಳ, ಹಿಮಾಚಲ ಪ್ರದೇಶ, ರಾಜಾಸ್ತಾನ ಮತ್ತು ತಮಿಳುನಾಡು ರಾಜ್ಯಗಳನ್ನು ಹೆಸರಿಸಬಹುದು. ಈ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಹಾಗು ಜಾಗತಿಕ ಪ್ರವಾಸಿಗರಿಗೆ ಮಾಹಿತಿ ನೀಡುವಲ್ಲಿ ರಾಜ್ಯ ಸರ್ಕಾರಗಳು ಗಮನಹರಿಸಿ ಭಾರತಕ್ಕೆ ಭೇಟಿ ನೀಡುವ ವಿದೇಶಿ ಪ್ರವ